Thursday, 19th September 2024

ಅಸ್ಸಾಂ ಕಾಂಗ್ರೆಸ್‌ ಶಾಸಕ ಅಫ್ತಾಬುದ್ದೀನ್‌ ಮುಲ್ಲಾ ಬಂಧನ

ಡಿಸ್ಪುರ: ಅರ್ಚಕರು, ಸಂತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಸ್ಸಾಂ ಕಾಂಗ್ರೆಸ್‌ ಶಾಸಕ ಅಫ್ತಾಬುದ್ದೀನ್‌ ಮುಲ್ಲಾ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. “ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಜಾಲೇಶ್ವರ್‌ ವಿಧಾನಸಭೆ ಕ್ಷೇತ್ರದ ಶಾಸಕ ಅಫ್ತಾಬುದ್ದೀನ್‌ ಮುಲ್ಲಾರನ್ನು ಬಂಧಿಸಲಾಗಿದೆ” ಎಂದು ಅಸ್ಸಾಂ ಪೊಲೀಸರು ಮಾಹಿತಿ ನೀಡಿದ್ದಾರೆ. ಅಫ್ತಾಬುದ್ದೀನ್‌ ಮುಲ್ಲಾ ಅವರು ನವೆಂಬರ್‌ 4ರಂದು ಗೋವಾಲ್‌ಪರ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಾಧುಗಳು, ಸಂತರು ಹಾಗೂ ಅರ್ಚಕರ ವಿರುದ್ಧ ಮಾತನಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಡಿಸ್ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈಗ ಪೊಲೀಸರು […]

ಮುಂದೆ ಓದಿ