ಮುಂಬೈ: ಸಿಬ್ಬಂದಿ ಕೊರತೆಯಿಂದಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ 75 ವಿಮಾನಗಳು ಶುಕ್ರವಾರ ಹಾರಾಟ ನಡೆಸಲಿಲ್ಲ. ಸಂಸ್ಥೆ ಮತ್ತು ಸಿಬ್ಬಂದಿ ನಡುವಿನ ಜಾಟಪಟಿಯಿಂದಾಗಿ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಭಾನುವಾರದ ಹೊತ್ತಿಗೆ ಇದು ಪರಿಹಾರವಾಗುವ ಸಾಧ್ಯತೆ ಇದೆ ಎಂದೆನ್ನಲಾಗಿದೆ. ಹಾರಾಟ ರದ್ದತಿಯಿಂದಾಗಿ ಟಿಕೆಟ್ ಶುಲ್ಕದ ಜತೆಗೆ ಪ್ರಯಾಣಿಕರಿಗೆ ಪರಿಹಾರ ರೂಪದಲ್ಲಿ ನೀಡಲಾಗುತ್ತಿರುವ ಹಣದಿಂದ ಸಂಸ್ಥೆಗೆ ₹30 ಕೋಟಿ ನಷ್ಟ ಉಂಟಾಗಿದೆ’ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಸಂಸ್ಥೆಯ ಕೆಲ ಸಿಬ್ಬಂದಿ ದಿಢೀರನೆ ಪ್ರತಿಭಟನೆಗೆ ಮುಂದಾಗಿದ್ದರಿಂದಾಗಿ ಮಂಗಳವಾರದಿಂದ ಸುಮಾರು 170ಕ್ಕೂ […]