ಲಂಡನ್: ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಅಜಿಂಕ್ಯ ರಹಾನೆ(Ajinkya Rahane) ಅವರು ಕೌಂಟಿ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿ ಮಿಂಚಿದ್ದಾರೆ. ಅವರ ಈ ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಲೀಸೆಸ್ಟರ್‌ಶೈರ್ ತಂಡ ಶೋಲಿನಿ ಭೀತಿಯಿಂದ ಪಾರಾಗಿ ಪಂದ್ಯವನ್ನು ಡ್ರಾ ಮಾಡಿಕೊಂಡಿತು. 36ರ ಹರೆಯದ ರಹಾನೆ ಅವರು ವಿಯಾನ್ ಮುಲ್ಡರ್ ಸ್ಥಾನಕ್ಕೆ ಬದಲಿ ಆಟಗಾರನಾಗಿ ಲೀಸೆಸ್ಟರ್‌ಶೈರ್ ತಂಡವನ್ನು ಸೇರಿಕೊಂಡಿದ್ದರು. ಇದೀಗ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿರುವ ರಹಾನೆ, ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ ಬಾಂಗ್ಲಾ ವಿರುದ್ಧದ ತವರಿನ ಟೆಸ್ಟ್ ಸರಣಿಯಲ್ಲಿ ಅವಕಾಶ […]