ಬಿಎಸ್ ಯಡಿಯೂರಪ್ಪ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ, ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಮುಖ ಖಾತೆಗಳ ಹಂಚಿಕೆ ತರುವಾಯ, ಮೈತ್ರಿ ಸರಕಾರದಲ್ಲಿ ನೇಮಕಗೊಂಡಿದ್ದ ಹಲವಾರು ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷ, ಸದಸ್ಯರನ್ನು ರದ್ದುಗೊಳಿಸಿತ್ತು. ಈಗ ಸರಕಾರ ಒಟ್ಟು 16 ಅಕಾಡೆಮಿ, ಪ್ರಾಧಿಕಾರಗಳಿಗೆ ಹೊಸದಾಗಿ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕನ್ನಡ ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಇಲಾಖೆಗಳಾದ ಕನ್ನಡ ಅಭಿವೃದ್ಧಿಿ ಪ್ರಾಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಸಾಹಿತ್ಯ ಅಕಾಡೆಮಿ, […]