ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪ್ತ ಅಲಂಕಾರ್ ಸವಾಯಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿ ಕಾರಿಗಳು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ. ಕ್ರೌಡ್ ಫಂಡಿಂಗ್ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ಅವರನ್ನು ಇತ್ತೀಚೆಗೆ ಗುಜರಾತ್‌ನಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಅಲಂಕಾರ್ ಸವಾಯಿ ಹೇಳಿಕೆಯನ್ನು ಇ.ಡಿ ದಾಖಲಿಸಿಕೊಂಡಿದೆ. ಈ ಸಂಬಂಧ ಅಲಂಕಾರ್ ಸವಾಯಿಗೆ ಸಮನ್ಸ್ ನೀಡಲಾಗಿತ್ತು. 35 […]