ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ನವ ದಂಪತಿಗೆ ಬಾಲಿವುಡ್ ನಟ -ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣ ಗಳಲ್ಲಿ ಶುಭ ಕೋರಿದ್ದಾರೆ. ಆಲಿಯಾ ಭಟ್, ರಣಬೀರ್ ಕಪೂರ್ ಅವರಿಗೆ ‘ಜೀವಮಾನದ ಪ್ರೀತಿ ಮತ್ತು ಸಂತೋಷ’ ಎಂದು ಪ್ರಿಯಾಂಕಾ ಚೋಪ್ರಾ ಶುಭ ಹಾರೈಸಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಫೋಟೊ ಹಂಚಿಕೊಂಡಿರುವ ಪ್ರಿಯಾಂಕಾ, ‘ನಿಮ್ಮಿಬ್ಬರಿಗೂ ಅಭಿನಂದನೆಗಳು… ಸದಾ ಪ್ರೀತಿ, ಸಂತೋಷ ನಿಮ್ಮದಾಗಲಿ’ ಎಂದು ಬರೆದುಕೊಂಡಿದ್ದಾರೆ. ಬಾಂದ್ರಾದ […]