ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ನಾಯಕರು ಲೋಕಸಮರಕ್ಕೆ ಭರ್ಜರಿ ತಯಾರಿ ನಡೆಸುತ್ತಿದಾರೆ. ವಿಧಾನಸಭೆ ಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಲೋಕಸಭಾ ಚುನಾವಣೆ ಹಿನ್ನಲೆ ಮೈಸೂರಿಗೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಚಾಣಕ್ಯ ಅಮಿತ್ ಶಾ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆ.10ರಂದು ಮೈಸೂರಿಗೆ ಆಗಮಿಸಲಿರುವ ಅಮಿತ್ ಶಾ ಅವರು ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ […]