ಪೋರ್ಟ್-ಒ-ಪ್ರಿನ್ಸ್ (ಹೈಟಿ): ಏರಿಯಲ್ ಹೆನ್ರಿ ಅವರು ಹೈಟಿಯ ನೂತನ ಪ್ರಧಾನಿಯಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ವೃತ್ತಿಯಿಂದ ನರರೋಗ ಶಸ್ತ್ರಚಿಕಿತ್ಸಕ ಹೆನ್ರಿ, ಈ ಮೊದಲು ಸಂಪುಟ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ ಅವರು, ‘ನಾವು ಮಾಡಬೇಕಾದ ಕಾರ್ಯಗಳು ಬಹಳ ಕಠಿಣ ಹಾಗೂ ಸಂಕೀರ್ಣವಾದವುಗಳಾಗಿವೆ. ಎಲ್ಲರೂ ಒಗ್ಗಟ್ಟಿನಿಂದ ಈ ಸವಾಲುಗಳನ್ನು ಎದುರಿಸೋಣ’ ಎಂದರು. ಜೊವೆನೆಲ್ ಮೊಯಿಸ್ ಅವರ ಹತ್ಯೆ ಕುರಿತು ನಡೆಯುತ್ತಿರುವ ತನಿಖೆಗೆ ಮಿತ್ರ ರಾಷ್ಟ್ರಗಳ ಸಹಕಾರ ಕೋರುವೆ. ಈ ದುಷ್ಕೃತ್ಯಕ್ಕೆ ಕಾರಣರಾದವರಿಗೆ ಶಿಕ್ಷಿಸದೇ ಬಿಡುವುದಿಲ್ಲ ಎಂದರು. ಅಧ್ಯಕ್ಷರಾಗಿದ್ದ […]