ಅಹಮದಾಬಾದ್: ಗುಜರಾತ್ ಮುಖ್ಯ ನ್ಯಾಯಮೂರ್ತಿಗಳು ಕನ್ನಡ ಭಾಷೆ ಬಳಸಿದ್ದು ಇದೀಗ ಭಾರಿ ಸುದ್ದಿಯಾಗಿದೆ. ಇದಕ್ಕೆ ಕಾರಣ ಇಷ್ಟೇ. ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಕರ್ನಾಟಕದವರೇ ಆಗಿರುವ ಅರವಿಂದ ಕುಮಾರ್ ಅವರು. ಹೈಕೋರ್ಟ್ ಸೇರಿದಂತೆ ಎಲ್ಲಾ ನ್ಯಾಯಾಲಯಗಳಲ್ಲಿಯೂ ಆಯಾ ರಾಜ್ಯಗಳ ಭಾಷೆಗಳನ್ನೇ ಕಡ್ಡಾಯ ಮಾಡಬೇಕು ಎಂದು ಕೆಲ ದಶಕಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೇಸೊಂದರ ವಿಚಾರಣೆ ವೇಳೆ ಕಕ್ಷಿದಾರನೊಬ್ಬರು ಖುದ್ದು ವಾದ ಮಂಡಿಸುತ್ತಿದ್ದರು. ಆ ಸಂದರ್ಭ ದಲ್ಲಿ ಆತ ಗುಜರಾತಿ ಭಾಷೆಯನ್ನು ಆಡಲು ಆರಂಭಿಸಿ ದ್ದಾರೆ. ಅದರಿಂದ ನ್ಯಾಯಮೂರ್ತಿ ಅರವಿಂದ […]