ಗುವಾಹಟಿ: ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾನುವಾರ ಪಕ್ಷದ ನಾಯಕ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ಬಿಜೆಪಿ ಬೆಂಬಲಿಗರ ಗುಂಪು ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆ ಭಾನುವಾರ, ಎರಡನೇ ಬಾರಿಗೆ ಅಸ್ಸಾಂಗೆ ಕಾಲಿಟ್ಟಿದೆ. ಬಿಸ್ವಂತ್ ಜಿಲ್ಲೆಯಿಂದ ಸೋನಿತ್ ಪುರ ಮೂಲಕ ನಗಾಂವ್‌ಗೆ ಪ್ರಯಾಣ ಬೆಳೆಸುತ್ತಿದೆ. ಈ ವೇಳೆ ಯಾತ್ರೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ಬಿಜೆಪಿಯ ಗುಂಪು ದಾಳಿ ನಡೆಸಿದೆ […]