ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಡಿಸೆಂಬರ್ 17 ರಿಂದ ಅಡಿಲೇಡ್‌ನಲ್ಲಿ ಆರಂಭವಾಗಲಿರುವ ಅಹರ್ನಿಶಿ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರತಿದಿನ 27 ಸಾವಿರ ಪ್ರೇಕ್ಷಕರಿಗೆ ಅವಕಾಶ ನೀಡಲು ಆಯೋಜಕರು ತೀರ್ಮಾನಿಸಿದ್ದಾರೆನ್ನಲಾಗಿದೆ. ಕ್ರೀಡಾಂಗಣದ ಒಟ್ಟು ಸಾಮರ್ಥ್ಯದಲ್ಲಿ ಶೇಕಡ 50 ಮಂದಿ ಪಂದ್ಯ ವೀಕ್ಷಿಸಲಿದ್ದಾರೆ. ಕರೊನಾ ವೈರಸ್ ಭೀತಿಯಿಂದಾಗಿ ಕ್ರಿಕೆಟ್ ಪಂದ್ಯಗಳು ಖಾಲಿ ಸ್ಟೇಡಿಯಂನಲ್ಲಿ ನಡೆಯುತ್ತಿವೆ. ಆದರೆ, ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಸರಣಿ ವೀಕ್ಷಿಸಲು ಪ್ರೇಕ್ಷಕ ರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಐಪಿಎಲ್-13 ಮುಕ್ತಾಯಗೊಂಡ ಬೆನ್ನಲ್ಲೇ ಭಾರತ ತಂಡ […]