ಅಯೋಧ್ಯೆ: ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿದ್ದು, ಇಂದಿನಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮಂದಿರದ ನಿರ್ಮಾಣ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ. ದರ್ಶನದ ಮೊದಲ ದಿನ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ದೇವಾಲಯದ ಮುಖ್ಯದ್ವಾರದ ಬಳಿ ಭಕ್ತರು ಕಾದು ನಿಂತಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಹಂಚಿಕೊಂಡಿದೆ. ದೇವಾಲಯದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿರುವ ದೃಶ್ಯಗಳು ವಿಡಿಯೊದಲ್ಲಿದೆ. ಭಕ್ತರಿಗೆ ಬಾಲರಾಮನ ದರ್ಶನಕ್ಕಾಗಿ ಎರಡು ಅವಧಿಯನ್ನು ನಿಗದಿಪಡಿಸಲಾಗಿದೆ. […]