B.S.Yediyurappa: ಟಿ.ಜೆ.ಅಬ್ರಹಾಂ ಅವರು 2020ರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ನೀಡಲಾದ ಭ್ರಷ್ಟಾಚಾರದ ದೂರಿನಲ್ಲಿ ಗಂಭೀರವಾದ 16 ಆರೋಪಗಳನ್ನು ಮಾಡಿದ್ದಾರೆ. ಅವರು ಈ ಆರೋಪಗಳನ್ನು ತನಿಖೆ ಮಾಡಿಸುವಂತೆ ರಾಜ್ಯಪಾಲರಿಗೆ ದೂರನ್ನೂ ನೀಡಿದ್ದಾರೆ. ಆದರೆ ರಾಜ್ಯಪಾಲರು ತನಿಖೆ ಮಾಡಲು ಅನುಮತಿ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ (ನ. 28) ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಈ ಬಗ್ಗೆ ಚರ್ಚೆ ನಡೆಸಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಿದೆ.