ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ಎಂ.ವಿ. ರಾಜೀವ್ ಗೌಡ ಅವರ ಪತ್ನಿ ಶರ್ಮಿಳಾ ಭಕ್ತರಾಮ್ ಅವರು ಯಶವಂತಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಗಾರ್ಮೆಂಟ್ ಮಹಿಳೆಯರ ಬಳಿ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ದುಡಿಯುವ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ, ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮನೆಯೊಡತಿಗೆ ೨ ಸಾವಿರ ರೂ. ನೀಡುತ್ತಿದೆ, ಅಷ್ಟೇ ಅಲ್ಲದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ೧ ಲಕ್ಷ ರೂ.ವರೆಗೂ ಹಣ ನೀಡುವ […]