ಬೆಂಗಳೂರು: ರಾಜ್ಯಾದ್ಯಂತ ಪೂರ್ವಮುಂಗಾರು ಚುರುಕುಗೊಂಡಿದ್ದು, ಭಾನುವಾರ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾ ಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 8 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ದಕ್ಷಿಣ ಕನ್ನಡ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡುಗು ಜಿಲ್ಲೆಗಳಿಗೆ ಇಲಾಖೆ ‘ಯೆಲ್ಲೊ ಅಲರ್ಟ್’ ನೀಡಿದೆ. ಇನ್ನುಳಿದ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯ ಬಗ್ಗೆಯೂ ಇಲಾಖೆ ಮುನ್ಸೂಚನೆ ನೀಡಿದೆ. […]