ಇಂಫಾಲ: ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕಿನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ ಧರಿಸಿದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯು ಭಾರತೀಯ ರಿಸರ್ವ್ ಬ್ಯಾಂಕ್ ಉಖ್ರುಲ್ ಜಿಲ್ಲೆಯ ಇತರೆ ಬ್ಯಾಂಕುಗಳು ಮತ್ತು ಎಟಿಎಂಗಳಿಗೆ ಮೀಸಲಾದ ಹಣವನ್ನು ಸಂಗ್ರಹಿಸುವ ಕರೆನ್ಸಿ ಚೆಸ್ಟ್ ಆಗಿದೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದರೋಡೆಕೋರರು ಉಖ್ರುಲ್ ಪಟ್ಟಣದ ಬ್ಯಾಂಕಿಗೆ ಆಗಮಿಸಿ, ಭದ್ರತಾ ಸಿಬ್ಬಂದಿಯನ್ನು […]