Friday, 13th December 2024

ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎರಡನೇ ದಿನವೂ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಶುಕ್ರವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ನೌಪೋರಾದಲ್ಲಿ ಗುರುವಾರ ಕಾರ್ಯಾಚರಣೆ ನಡೆಸಲಾಗಿತ್ತು. ಶುಕ್ರವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಿದ್ದಾರೆ. ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಪೋರ್ ಪ್ರದೇಶದಲ್ಲಿ ಕಾರ್ಯಾಚರಣೆ […]

ಮುಂದೆ ಓದಿ