ನವದೆಹಲಿ: ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಜಯಗಳಿಸಿದ್ದಾರೆ. ಬರೋಬ್ಬರಿ 23 ವರ್ಷಗಳ ಬಳಿಕ ಮತ್ತೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆಯಾಗಿದ್ದು, ಪ್ರತಿಸ್ಪರ್ಧಿ ಹಿರಿಯ ವಕೀಲ ಪ್ರದೀಪ್ ರಾಯ್ ಅವರನ್ನು ಸೋಲಿಸುವ ಮೂಲಕ ವಿಜಯಿಯಾದರು. ಪ್ರದೀಪ್ ರಾಯ್ 689 ಮತ ಗಳಿಸಿದರೆ, ಕಪಿಲ್ ಸಿಬಲ್ ಅವರು 1066 ಮತ ಗಳಿಸಿದರು. ಹಾಲಿ ಅಧ್ಯಕ್ಷ, ಹಿರಿಯ ವಕೀಲ ಡಾ. ಆದೀಶ್ […]