ಮುಂಬೈ: ಭಾರತೀಯ ಜೀವ ವಿಮಾ ನಿಗಮದ ವ್ಯವಸ್ಥಾಪಕ ನಿರ್ದೇಶಕನ ಸ್ಥಾನಕ್ಕೆ ಬಿ.ಸಿ. ಪಟ್ನಾಯಕ್ ಅವರನ್ನು ಅ.1 ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಎಲ್‌ಐಸಿಯಲ್ಲಿ ಮೂವತ್ತು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಕೆಲಸ ಮಾಡುತ್ತಿರುವ ಅವರು ಹಲವು ಹುದ್ದೆಗಳಲ್ಲಿ ಜವಾಬ್ದಾರಿ ನಿಭಾಯಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಪಟ್ನಾಯಕ್ ಅವರು 1986ರಲ್ಲಿ ಎಲ್‌ಐಸಿ ಸೇರಿದರು. ಎಂ.ಡಿ. ಆಗಿ ಅಧಿಕಾರ ಸ್ವೀಕರಿಸುವ ಮೊದಲು ಅವರು ವಿಮಾ ಒಂಬುಡ್ಸ್ ಮನ್ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಆಗಿದ್ದರು.