ನವದೆಹಲಿ: ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಬಿಜೆಪಿ ಶುಕ್ರವಾರ 5 ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ. ಮಹಿಳೆಯನ್ನು ಅಮಾನುಷವಾಗಿ ನಡೆಸಿಕೊಂಡ ಘಟನೆ ಖಂಡಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಈ ಸಮಿತಿ ರಚಿಸಿದ್ದಾರೆ. ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಸತ್ಯಶೋಧನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಸಂಸದರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ […]