ರೂರ್ಕೆಲಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆ ಮಂಗಳವಾರ ಒಡಿಶಾ ಪ್ರವೇಶಿಸಲಿದೆ. ಯಾತ್ರೆಯು ಜಾರ್ಖಂಡ್‌ನಿಂದ ರಾಜ್ಯವನ್ನು ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬಿರಾಮಿತ್ರಪುರವನ್ನು ಬ್ಯಾನರ್‌ಗಳು ಹಾಗೂ ಕಟೌಟ್‌ಗಳಿಂದ ಅಲಂಕರಿಸಲಾಗಿದೆ. ಬಿರಾಮಿತ್ರಪುರದಿಂದ ಸುಮಾರು 35 ಕಿಮೀ ದೂರದಲ್ಲಿರುವ ರೂರ್ಕೆಲಾ ಸ್ಟೀಲ್ ಸಿಟಿಯಲ್ಲಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಜಮಾಯಿಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಮೊಮ್ಮಗ ರಾಹುಲ್ ಗಾಂಧಿಯನ್ನು ನೋಡಲು ಜನರು ಉತ್ಸಾಹದಿಂದ ಕಾದಿದ್ದಾರೆ ಎಂದು ಪಕ್ಷದ […]