Sunday, 8th September 2024

ಕನ್ನಡ ಚಿತ್ರರಂಗದ ಮೇರು ನಟ ಡಾ| ವಿಷ್ಣುವರ್ಧನ್ ಪ್ರತಿಮೆ ಧ್ವಂಸ

ಬೆಂಗಳೂರು: ಮಾಗಡಿ ರಸ್ತೆಯಲ್ಲಿರುವ ಕನ್ನಡ ಚಿತ್ರರಂಗದ ಮೇರು ನಟ ಡಾ| ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿ ಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ. ನಗರದ ಮಾಗಡಿ ರಸ್ತೆಯಲ್ಲಿರುವ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಧ್ವಂಸ ಗೊಳಿಸಿದ್ದಾರೆ. ಸ್ಥಳದಲ್ಲೇ ವಿಷ್ಣು ಅಭಿಮಾನಿಗಳು ಸೇರಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಇದೇ ಸ್ಥಳದಲ್ಲಿ ಪ್ರತಿಮೆ ಧ್ವಂಸವಾಗಿತ್ತು. ಆಗ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಂದೆ ಓದಿ

error: Content is protected !!