ಪಟನಾ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸ್ ಠಾಣೆಗೇ ಬೆಂಕಿ ಹಚ್ಚಿದ್ದಾರೆ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಕಲ್ಲುತೂರಾಟ ನಡೆಸಿದ ಕಾರಣ ಪೊಲೀಸರು ಸ್ವಯಂ ರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಪೊಲೀಸರನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯೊಬ್ಬರು ತಮ್ಮ ಹೆಂಡತಿ ತೀರಿಕೊಂಡ ಬಳಿಕ 14 ವರ್ಷದ ನಾದಿನಿಯನ್ನು ಮದುವೆಯಾಗಿದ್ದರು. ಹೆಂಡತಿ ತೀರಿಕೊಂಡ ಬಳಿಕ ನಾದಿನಿಯನ್ನು […]