ಪಾಟ್ನಾ: ಕಳೆದ ವರ್ಷ ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಿದ್ದ ಬಿಹಾರ ಸರ್ಕಾರದ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯವ್ಯಾಪಿ ಜಾತಿ ಸಮೀಕ್ಷೆ ನಡೆಸಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಕಳೆದ ವರ್ಷ ಹೆಚ್ಚಿಸಲಾಗಿತ್ತು. ರಾಜ್ಯ ಸರ್ಕಾರದ ಈ ಕ್ರಮವು ಸುಪ್ರೀಂ ಕೋರ್ಟ್ ಆದೇಶಿಸಿದ ಮೀಸಲಾತಿಯ ಶೇ. 50 ರ ಮಿತಿಯನ್ನು ಮೀರಿದೆ. ಹೀಗಾಗಿ ಪಾಟ್ನಾ ಹೈಕೋರ್ಟ್ […]