ನವದೆಹಲಿ: ಬಿಹಾರದ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸಲು ಧೈರ್ಯಶಾಲಿ ಮಹಿಳೆ ಮುಂದೆ ಬರಬೇಕು ಎಂದಿರುವ ಮಿಲ್ಬೆನ್, ನಾನು ಭಾರತದ ಪ್ರಜೆಯಾಗಿದ್ದರೆ, ಬಿಹಾರಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸುತ್ತಿದ್ದೆ ಎಂದು ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್ ಹೇಳಿದ್ದಾರೆ. ಮಹಿಳೆಯರ ಕುರಿತಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿಲುವನ್ನು ಶ್ಲಾಘಿಸಿರುವ ಅವರು, ಭಾರತ ಮತ್ತು ಭಾರತೀಯ ನಾಗರಿಕರ ಪ್ರಗತಿಗೆ ಅವರು ಅತ್ಯುತ್ತಮ ನಾಯಕ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಹಿಳೆಯರ ಕುರಿತಾಗಿ ವಿಧಾನಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿದ್ದಾರೆ. […]