ಬೆಂಗಳೂರು: ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು ಪ್ರಪಂಚಾದ್ಯಂತ ಗುರುತಿಸುವ ಹಾಗೆ ಮಾಡಿದ್ದಾರೆ. ಆದ್ದರಿಂದ ಬಿಜೆಪಿಗೆ ನಮ್ಮ ಸಮುದಾಯ ಬೆಂಬಲವಾಗಿ ನಿಲ್ಲಲಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ಅಧ್ಯಕ್ಷ ಡಾ.ಜಯಂತ್ ಕೆ.ಎಂ. ತಿಳಿಸಿದರು. ನಮ್ಮ ಸಮಾಜದ ಹಿತದೃಷ್ಟಿ ಎಂದರೆ ನಮ್ಮ ವಿಶ್ವಕರ್ಮ ಸಮಾಜವು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ […]