ನವದೆಹಲಿ: ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಶುಕ್ರವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು. ಮಹಿಳಾ ಮೋರ್ಚಾದ ಅಧ್ಯಕ್ಷೆ ರಿಚಾ ಪಾಂಡೆ ಮಿಶ್ರಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಳೆಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿದರು. ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಘಟನೆಯ ಬಗ್ಗೆ ಕೇಜ್ರಿವಾಲ್ ಮೌನವಾಗಿರುವುದಕ್ಕೆ ಬಿಜೆಪಿ ಮಹಿಳಾ ಅವರಿಗೆ ಬಳೆಗಳನ್ನು ಹಸ್ತಾಂತರಿಸಲು ಬಯಸಿದೆ ಎಂದು ಮಿಶ್ರಾ […]