ಮುಂಬೈ: ಅಮೆರಿಕದ ಸಿಲಿಕಾನ್ ವ್ಯಾಲಿ ಬ್ಯಾಂಕ್, ಸೆಂಚುರಿ ಬ್ಯಾಂಕ್ ಪತನಗೊಂಡ ಪರಿಣಾಮ ಬಾಂಬೆ ಷೇರು ಮಾರುಕಟ್ಟೆ ವಹಿವಾಟಿನ ಮೇಲೂ ಪರಿಣಾಮ ಬೀರಿತ್ತು. ಏತನ್ಮಧ್ಯೆ ಬುಧವಾರ ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲೇ 440 ಅಂಕ ಏರಿಕೆ ಕಂಡಿದೆ. ಬಾಂಬೆ ಷೇರು ಮಾರುಕಟ್ಟೆ ಸೇರಿದಂತೆ ಜಾಗತಿಕವಾಗಿ ಜಪಾನ್, ಹಾಂಗ್ ಕಾಂಗ್ ಷೇರುಪೇಟೆ ಸೆನ್ಸೆಕ್ಸ್ ಕೂಡಾ ಜಿಗಿತ ಕಂಡಿದೆ. ಮಂಗಳವಾರ ಅಮೆರಿಕ, ಯುರೋಪಿಯನ್ ಷೇರುಪೇಟೆ ಸೆನ್ಸೆಕ್ಸ್ ಏರಿಕೆಯೊಂದಿಗೆ ವಹಿವಾಟು ಕೊನೆಗೊಂಡಿತ್ತು. ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 440.04 ಅಂಕಗಳಷ್ಟು ಏರಿಕೆಯಾಗಿದ್ದು, 58,340.23 […]