ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರು ತಮ್ಮ ಶಕ್ತಿ ಪ್ರದರ್ಶಿಸಲು ಜೂನ್ 5ರಂದು ಅಯೋಧ್ಯೆಯಲ್ಲಿ ರ್ಯಾಲಿ ನಡೆಸಲಿದ್ದಾರೆ. ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳಿಗೆ ಗುರಿಯಾ ಗಿರುವ ಬ್ರಿಜ್ ಭೂಷಣ್, 2024ರಲ್ಲಿ ಮತ್ತೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಈ ರ್ಯಾಲಿಯನ್ನು ಡ್ಯಾಮೇಜ್ ಕಂಟ್ರೋಲ್ ಮಾಡುವ ಅವರ ಪ್ರಯತ್ನ ಎಂದು ನೋಡಲಾಗುತ್ತಿದೆ. ಏತನ್ಮಧ್ಯೆ, ಬಿಜೆಪಿಯ ಅಯೋಧ್ಯೆ ಘಟಕವು ಬ್ರಿಜ್ ಭೂಷಣ್ ರ ರ್ಯಾಲಿ ಯಿಂದ ದೂರ ಉಳಿದಿದೆ. […]