Sunday, 15th December 2024

ಬುಲಂದ್‌ಶಹರ್‌ನಲ್ಲಿ ಬಸ್-ಟೆಂಪೋ ಡಿಕ್ಕಿ: ಹತ್ತು ಜನರ ಸಾವು

ಲಕ್ನೋ: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬಸ್ ಮತ್ತು ಟೆಂಪೋ ಡಿಕ್ಕಿ ಹೊಡೆದು ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೋಲಿಸರ ಪ್ರಕಾರ, ಟೆಂಪೋದಲ್ಲಿ 25 ಜನರು ಪ್ರಯಾಣಿಸುತ್ತಿದ್ದರು ಮತ್ತು ಅವರಲ್ಲಿ ಹತ್ತು ಮಂದಿ ಸೇಲಂಪುರ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುವಾಗ ಟೆಂಪೋಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿಯಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ […]

ಮುಂದೆ ಓದಿ