ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಅವರ ಹತ್ಯೆಯಾಗಿದ್ದು ಅತ್ಯಂತ ಖಂಡನೀಯ. ಈ ಘಟನೆ ಯಿಂದಾಗಿ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಈ ಹೇಯ ಕೃತ್ಯದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಇಂಥ ಘಟನೆಗಳು ಯಾವುದೇ ರಾಜ್ಯ, ದೇಶ ಮತ್ತು ಸಮುದಾಯಗಳನ್ನು ತಲೆತಗ್ಗಿಸುವಂತೆ ಮಾಡುತ್ತವೆ. ಇಂಥ ಘಟನೆಗಳನ್ನು ನೋಡಿದಾಗ ಹೆಣ್ಣು ಮಕ್ಕಳನ್ನು ಶಾಲಾ, ಕಾಲೇಜುಗಳಿಗೆ ಕಳುಹಿಸಲು ಪೋಷಕರು ಹಿಂಜರಿಯುತ್ತಾರೆ. ವಿದ್ಯಾರ್ಥಿಗಳ ಪಾಲಕ ರಿಂದ […]