ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆಗಳ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಶೇ 94ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 10ನೇ ತರಗತಿ ಹಾಗೂ 12ನೇ ತರಗತಿಯ ಫಲಿತಾಂಶವನ್ನು ಸಿಬಿಎಸ್‌ಇ ಒಂದೇ ದಿನ ಬಿಡುಗಡೆ ಮಾಡಿ ರುವುದು ಇದೇ ಮೊದಲು. ಬಾಲಕಿಯರ ತೇರ್ಗಡೆ ಪ್ರಮಾಣ ಶೇ 95.21ರಷ್ಟಿದ್ದರೆ, ಬಾಲಕರ ತೇರ್ಗಡೆ ಪ್ರಮಾಣ ಶೇ 93.80ರಷ್ಟಿದೆ. 10ನೇ ತರಗತಿ ಫಲಿತಾಂಶಕ್ಕೂ ಕೆಲವೇ ಗಂಟೆಗಳ ಮುನ್ನ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿತ್ತು. ಶೇ 92.71 ರಷ್ಟು ಫಲಿತಾಂಶ ದಾಖಲಾಗಿತ್ತು.