ಬೆಂಗಳೂರು: ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಚಿತ್ರತಂಡದಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ. ಪ್ರಶಾಂತ್ ಕುಮಾರ್ ಸಿಬಿಐ ಬಲೆಗೆ ಬಿದ್ದಿರುವ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ. ಅಡವಿ ಹೆಸರಿನ ಕನ್ನಡ ಚಲನಚಿತ್ರಕ್ಕೆ ಸೆನ್ಸಾರ್ ಸರ್ಟಿಫಿ ಕೇಟ್ ಕೊಡಲು 15 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. 12 ಸಾವಿರ ರೂ. ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಬಿಐ ಅಧಿಕಾರಿಗಳು ಪ್ರಶಾಂತ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಅಡವಿ ಹೆಸರಿನ ಚಿತ್ರತಂಡ […]