Thursday, 28th March 2024

ಡಾ.ಚಂದ್ರಶೇಖರ ಪತ್ನಿ ಸತ್ಯಭಾಮ ವಿಧಿವಶ: ಬೊಮ್ಮಾಯಿ ತೀವ್ರ ಸಂತಾಪ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ವಿಧಿವಶರಾಗಿದ್ದಾರೆ. ಸತ್ಯಭಾಮ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದರು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು. ಸತ್ಯಭಾಮ ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ. […]

ಮುಂದೆ ಓದಿ

error: Content is protected !!