ಮುಂಬೈ: ಮುಂಬೈನ ಹೊಟೇಲ್ ಉದ್ಯಮಿ ಜಯಾ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಪ್ರಕರಣ(2001)ದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ(MCOCA) ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು, ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ರಾಜನ್ ಅಪರಾಧಿ ಎಂದು ಘೋಷಿಸಿದರು. ಜಯಾ ಶೆಟ್ಟಿ ಅವರು ಸೆಂಟ್ರಲ್ ಮುಂಬೈನ ಗಮದೇವಿಯಲ್ಲಿ ಗೋಲ್ಡನ್ ಕ್ರೌನ್ ಹೋಟೆಲ್ ನಡೆಸುತ್ತಿದ್ದರು. ಮೇ 4, 2001ರಂದು ರಾಜನ್ ಗ್ಯಾಂಗ್‌ನ […]