ಮಕ್ಕಳ ಸಹಾಯವಾಣಿಯೊಂದಿಗೆ ಗೆಳೆತನ ಕಾರ್ಯಕ್ರಮ ಧಾರವಾಡ: ಕೋವಿಡ್ ನಿಯಂತ್ರಣಕ್ಕಾಗಿ ಪ್ರಸಕ್ತ ವರ್ಷದಲ್ಲಿ ಮಕ್ಕಳು ಶಾಲಾ ಪಾಠಗಳಿಂದ ವಂಚಿತರಾಗಿದ್ದಾರೆ, ಅನೇಕರು ಆನ್ ಲೈನ್ ಮೂಲಕ ಪಾಠಗಳನ್ನು ಆಲಿಸುತ್ತಿದ್ದಾರೆ ಆದರೆ ಈ ಅವಕಾಶವಿಲ್ಲದ ಬಹಳಷ್ಟು ಮಕ್ಕಳಿದ್ದಾರೆ ಅಂತಹ ಮಕ್ಕಳ ಬಾಲ್ಯ,ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸುವುದು ಸಮಾಜದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಹೇಳಿದರು. ಇಲ್ಲಿನ ಉಪನಗರ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಡಳಿತ, ಮಕ್ಕಳ ಸಹಾಯವಾಣಿ 1098 ಸಿಐಎಫ್ ಹಾಗೂ ಇತರೆ ಇಲಾಖೆಗಳು, […]