ಬೆಳಗಾವಿ: ಬೆಳಗಾವಿಯಲ್ಲಿ (Belagavi news) ಘೋರ ದುರಂತವೊಂದು ನಡೆದಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಚಕ್ರಕ್ಕೆ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ (Child death) ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಗಾಲಿಗೆ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿದೆ. ಖಜಗೌಡನಟ್ಟಿ ಗ್ರಾಮದ ಮಂಜುನಾಥ್ ಖೋತ ಎಂಬುವರು ಕಾರು ರಿವರ್ಸ್ ತೆಗೆದುಕೊಳ್ಳುವಾಗ ಮಗು ಆಕಸ್ಮಿಕವಾಗಿ ಕಾರಿನ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. […]