ಬೀಜಿಂಗ್: ಚೀನಾದ ಕೋಟ್ಯಧಿಪತಿ ಉದ್ಯಮಿ ಜಾಕ್ ಮಾ ಎರಡು ತಿಂಗಳುಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಆಫ್ರಿಕಾದ ಬಿಸಿನೆಸ್ ಹೀರೋಸ್ ಎಂಬ ಪ್ರತಿಭಾನ್ವೇಷಣೆ ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗುತ್ತಿದ್ದ ಜಾಕ್ ಅವರು ಈ ಬಾರಿ ಗೈರಾಗಿದ್ದಾರೆ. ಆಫ್ರಿಕಾದ ಉದ್ಯಮಿಗಳನ್ನು ಪ್ರೋತ್ಸಾಹಿಸಿ 1.5 ಮಿಲಿಯನ್ ಡಾಲರ್ ಪ್ರಶಸ್ತಿ ಮೊತ್ತ ನೀಡುವ ಶೋ ಇದಾಗಿದೆ. ಈ ಕಾರ್ಯಕ್ರಮದ ತೀರ್ಪುಗಾರರಾಗಿ ಜಾಕ್ ಪಾಲ್ಗೊಳ್ಳುತ್ತಿದ್ದರು. ಆದರೆ, ಈ ಬಾರಿ ಜಾಕ್ ಬದಲಿಗೆ ಬೇರೊಬ್ಬ ಅಧಿಕಾರಿಯನ್ನು ಆಲಿಬಾಬಾ ಸಂಸ್ಥೆ ಕಳಿಸಿತ್ತು. ಅಕ್ಟೋಬರ್ 24ರಂದು ಚೀನಾ ಸರ್ಕಾರದ ನೀತಿ ವಿರುದ್ಧ […]