ನವದೆಹಲಿ: ಚೈನೀಸ್ ಸಿಸಿಟಿವಿ ಕ್ಯಾಮೆರಾಗಳನ್ನು ಭಾರತದಲ್ಲಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ನಿಷೇಧಿಸುವಂತೆ ಅರುಣಾಚಲ ಕಾಂಗ್ರೆಸ್ ಶಾಸಕ ನಿನೊಂಗ್ ಎರಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪಾಸಿಘಾಟ್ ಪಶ್ಚಿಮದ ಶಾಸಕರು, ಮಾಜಿ ಕೇಂದ್ರ ಸಚಿವರೂ ಆಗಿರುವ ನಿನೊಂಗ್ ಎರಿಂಗ್ ಅವರು ತಾವು ಪ್ರಧಾನಿಗೆ ಬರೆದ ಪತ್ರವನ್ನು ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ‘ನಮ್ಮ ದೇಶದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಚೀನಾ ನಿರ್ಮಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದನ್ನು ನಿಷೇಧಿಸಬೇಕು. ಚೀನಾದ ಸಿಸಿಟಿವಿ ಕ್ಯಾಮೆರಾಗಳು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರಬಲ್ಲವು ಎಂದು […]