ಒಟ್ಟಾವಾ: ಕೆನಡಾದಲ್ಲಿ ಸೋಮವಾರ (ಡಿ. 16) ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಉಪ ಪ್ರಧಾನಿ (Canada’s deputy prime minister) ಕ್ರಿಸ್ಟಿಯಾ ಫ್ರೀಲ್ಯಾಂಡ್ (Chrystia Freeland) ಅನಿರೀಕ್ಷಿತವಾಗಿ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಉಪಪ್ರಧಾನಿ ಹುದ್ದೆಯ ಜತೆಗೆ ಹಣಕಾಸು ಖಾತೆಯನ್ನೂ ಅವರು ಹೊಂದಿದ್ದರು. ಸಚಿವ ಸಂಪುಟದಲ್ಲಿ ಪ್ರಧಾನಿ ಟ್ರುಡೊ ಅವರ ನಿಕಟ ಸಹೋದ್ಯೋಗಿಗಳಲ್ಲಿ ಒಬ್ಬರಾಗಿದ್ದ ಫ್ರೀಲ್ಯಾಂಡ್ ಅವರು ಸಂಸತ್ತಿನಲ್ಲಿ ದೇಶದ ಆರ್ಥಿಕ ಯೋಜನೆಯನ್ನು ಬಿಡುಗಡೆ […]