ದೇಶದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI Sanjiv Khanna) ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಅಮೃತಸರಕ್ಕೆ ಭೇಟಿ ನೀಡಿದಾಗಲೆಲ್ಲ ಕತ್ರಾ ಶೇರ್ ಸಿಂಗ್ ಗೆ ಭೇಟಿ ನೀಡುತ್ತಾರೆ. ಒಂದು ಕಾಲದಲ್ಲಿ ಇದು ತೀರ್ಥಯಾತ್ರೆ ಕ್ಷೇತ್ರವಾಗಿದ್ದು, ಕಾಲಾನಂತರದಲ್ಲಿ ಬದಲಾಗಿದೆ. ಈಗಲೂ ಇಲ್ಲಿಗೆ ಆಗಾಗ್ಗೆ ಭೇಟಿ ನೀಡುವ ನ್ಯಾಯಮೂರ್ತಿ ಖನ್ನಾ ಅವರು ತಮ್ಮ ಅಜ್ಜ ನಿರ್ಮಿಸಿದ ಮನೆಯನ್ನು ಹುಡುಕಲು ಪ್ರಯತ್ನಿಸುತ್ತಾರೆ.