ನವದೆಹಲಿ: “ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು ಬುಧವಾರ ಹೇಳಿದ್ದಿಷ್ಟು. “ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣ ಕಾಸು ಆಯೋಗದ ಮುಂದೆ […]