ಚಿಕ್ಕಬಳ್ಳಾಪುರ : ಜಗತ್ತಿನ ಅನೇಕ ರಾಷ್ಟ್ರಗಳು ವಿವಿಧ ರೀತಿಯ ಆಡಳಿತ ವ್ಯವಸ್ಥೆಗಳನ್ನು ಅಳವಡಿಸಿಕೊಂಡಿದ್ದು, ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಿ ಯಶಸ್ವಿಯಾಗಿ ಮುಂದುವರೆಯುತ್ತಿರುವುದಕ್ಕೆ ಕಳೆದ 78 ವರ್ಷಗಳ ಹಿಂದೆ ಬಾಬಾ ಸಾಹೇಬ್ ಅಂಬೇಡ್ಕರ್ ರಚಿತ ಸಂವಿಧಾನವೇ ಕಾರಣ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಮಾನವ […]