ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 514 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,422ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಇಬ್ಬರು ಮತ್ತು ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕೋವಿಡ್ ರೂಪಾಂತರಿ JN.1 ಮತ್ತು ಶೀತ ಹವಾಮಾನದ ಪರಿಸ್ಥಿತಿಯಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಒಟ್ಟು ಸಕ್ರಿಯ ಪ್ರಕರಣ […]