ಬೆಂಗಳೂರು: ಚಾಮರಾಜಪೇಟೆಯಲ್ಲಿ (Chamrajpet) ಹಸುಗಳ (Cow) ಕೆಚ್ಚಲು ಕೊಯ್ದು ಕ್ರೌರ್ಯ (Bengaluru Crime News) ಪ್ರದರ್ಶಿಸಿದ ಪ್ರಕರಣದಲ್ಲಿ ಒಬ್ಬ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಆರೋಪಿ ಪ್ಲಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕೃತ್ಯ ನಡೆದ ಜಾಗದಿಂದ 50 ಮೀಟರ್ ಅಂತರದಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಆರೋಪಿಯನ್ನು ಬಂಧಿಸಿ, […]