ಲಖನೌ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್’ನ ಅಭಿಪ್ರಾಯವನ್ನು ಮುಸ್ಲಿಂ ಧರ್ಮಗುರುಗಳು ಸ್ವಾಗತಿಸಿದ್ದಾರೆ. ಈ ನಡೆಯು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ ಮತ್ತು ಏಕತೆಯನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರು, ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾ ಅಧ್ಯಕ್ಷರು ಮತ್ತು ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ಹೈಕೋರ್ಟ್ ಅಭಿಪ್ರಾಯ ಜಾರಿಗೆ ತರಬೇಕು ಎಂದು ಹೇಳಿದ್ದಾರೆ. ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸುತ್ತೇನೆ. ದೇಶದಲ್ಲಿ […]