ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ(83 ವರ್ಷ) ಸೋಮವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿ ರೆಳೆದರು. ರವಿಚಂದ್ರನ್ ಅವರ ಮನೆಗೆ ಪಾರ್ಥೀವ ಶರೀರವನ್ನು ತರಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.