ಕಟಕ್: ಒಡಿಶಾದ ಕಟಕ್‌ನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ (49 ವರ್ಷ) ಅವರ ಮೃತದೇಹ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಕುತ್ತಿಗೆಯಲ್ಲಿ ಗಾಯದ ಗುರುತುಗಳಿವೆ ಎಂದು ಕಟಕ್ ನಗರ ವಲಯ 3ರ ಸಹಾಯಕ ಪೊಲೀಸ್ ಕಮಿಷನರ್ ತಪಸ್ ಪ್ರಧಾನ್ ಹೇಳಿದ್ದಾರೆ. ಘಟನೆ ನಡೆದಾಗ ನ್ಯಾಯಾಧೀಶರ ಪತ್ನಿ ಮನೆಯಲ್ಲಿರಲಿಲ್ಲ. ಕಳೆದೆರಡು ದಿನಗಳಿಂದ ರಜೆಯಲ್ಲಿದ್ದ […]