ಮುಂಬೈ: ನಿಯಮ ಉಲ್ಲಂಘನೆ ಮಾಡಿದ ಮಹಾರಾಷ್ಟ್ರದ ಆರು ಕೆಮ್ಮಿನ ಸಿರಪ್ ತಯಾರಕ ಕಂಪನಿಗಳ ಪರವಾನಗಿಯನ್ನು ಸರ್ಕಾರ ಅಮಾನತುಗೊಳಿಸಿದೆ ಎಂದು ಸಚಿವ ಸಂಜಯ್ ರಾಥೋಡ್ ತಿಳಿಸಿದ್ದಾರೆ. ಆಹಾರ ಮತ್ತು ಔಷಧ ಆಡಳಿತ ಸಚಿವ ಸಂಜಯ್ ರಾಥೋಡ್ ಅವರು ವಿಧಾನಸಭೆಯಲ್ಲಿ 6 ಕೆಮ್ಮಿಗೆ ಔಷಧ ತಯಾರಿಸುವ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡಿರುವ ಬಗ್ಗೆ ಮಾಹಿತಿ ನೀಡಿದರು. ಅವುಗಳಲ್ಲಿ ನಾಲ್ಕಕ್ಕೆ ಉತ್ಪಾದನೆ ನಿಲ್ಲಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ 108 ಕೆಮ್ಮು ಸಿರಪ್ ತಯಾರಕ ಕಂಪನಿಗಳ ಪೈಕಿ 84 ಕಂಪನಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರವು ತನಿಖೆಯನ್ನು […]