ದಾವಣಗೆರೆ: ಭದ್ರಾ ನೀರು ಹರಿಸುವಂತೆ ಭಾರತೀಯ ರೈತ ಒಕ್ಕೂಟದಿಂದ ರೈತರು ಇಂದು ದಾವಣಗೆರೆ ಬಂದ್ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ಜಾರಿಯಲ್ಲಿದ್ದು, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. 100 ದಿನಗಳ ಕಾಲ ನಿರಂತರವಾಗಿ ಭದ್ರಾ ನೀರು ಬಿಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ರೈತರಿಗೆ ಬಿಜೆಪಿ ಜಿಲ್ಲಾ ಘಟಕ ಬೆಂಬಲ ನೀಡಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣವೇ ನೀರು ಹರಿಸುವಂತೆ ರೈತರು ಮನವಿ ಮಾಡಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ರೈತ ಮುಖಂಡ […]